You are here
Home > Health > ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಪ್ರಮುಖವಾಗಿ ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿರುವುದು ಪೋಷಕರಲ್ಲಿ ಆತಂಕ ಉಂಟು ಮಾಡುತ್ತಿದೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ.

ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ 103 ಡಿಗ್ರಿ, 104 ಡಿಗ್ರಿ ಜ್ವರದಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ನಮ್ಮ ವಾರ್ಡ್‌ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.

ಆದರೆ ಈ ಬಗ್ಗೆ ಭಯ ಪಡುವುದು ಬೇಡ ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸೂಚನೆಯನ್ನ ನೀಡುತ್ತಿದ್ದು, ತಮ್ಮ ಸುತ್ತಲಿನ ಪರಿಸರವನ್ನ ಸ್ವಚ್ಚವಾಗಿ ಇಟ್ಟುಕೊಳ್ಳುವುದು, ಹಾಗೂ ಎಲ್ಲೂ ಕೂಡ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮತ್ತು ಸೂಕ್ತ ರೀತಿಯಾದ ಮುನ್ನೆಚ್ಚರಿಕೆಯನ್ನ ತೆಗೆದುಕೊಳ್ಳುವುದರ ಬಗ್ಗೆ ವೈದ್ಯರು ಸೂಚನೆಯನ್ನು ನೀಡಿದ್ದಾರೆ. ಇದರ ಜೊತೆಗೆ ಸಣ್ಣ ಮಟ್ಟಿಗೆ ಜ್ವರ ಕಂಡು ಬಂದರು ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನ ಪಡೆಯುವುದು ಉತ್ತಮ ಎಂದು ಆರೋಗ್ಯ ತಜ್ಙರು ಹೇಳುತ್ತಿದ್ದಾರೆ.

Top